Ticker

6/recent/ticker-posts

Ad Code

ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ಡಿಕ್ಕಿ: ಅಗ್ನಿ ಅನಾಹುತ, 11ಮಂದಿ ಸಜೀವ ದಹನ

 

ಬೆಂಗಳೂರು:  ಚಿತ್ರದುರ್ಗದಲ್ಲಿ ಬಸ್‌ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಮೃತರಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸೇರಿದ್ದಾರೆ. ಬಸ್ ಚಾಲಕ ಮತ್ತು ಕ್ಲೀನರ್ ಪರಾರಿಯಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿರಿಯೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಡಿವೈಡರ್ ದಾಟಿ ಮುಂದೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ 15 ಮಹಿಳೆಯರು, 14 ಪುರುಷರು ಮತ್ತು ಮಕ್ಕಳು ಸೇರಿದಂತೆ 32 ಮಂದಿ ಇದ್ದರು ಎಂಬುದು ಪ್ರಾಥಮಿಕ ಮಾಹಿತಿ. ಬದುಕುಳಿದವರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಿತ್ರದುರ್ಗ ಎಸ್ಪಿ ರಂಜಿತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಪ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

 ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿಹೇಳಿದ್ದಾರೆ.

Post a Comment

0 Comments