Ticker

6/recent/ticker-posts

Ad Code

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ಅಸ್ತಂಗತ

 

ಬಾಂಗ್ಲಾದೇಶದ  ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ (80) ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ನವೆಂಬರ್ 23ರಂದು ಹೃದಯ ಮತ್ತು ಶ್ವಾಸಕೋಶದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 36 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಜಿಯಾ, ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ ಮತ್ತು ಮೂತ್ರಪಿಂಡಗಳು, ಶ್ವಾಸಕೋಶಗಳು, ಹೃದಯ ಮತ್ತು ಕಣ್ಣುಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇವರ ನಿಧನಕ್ಕೆ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ  ಪಕ್ಷವು ಸಂತಾಪ ಸೂಚಿಸಿದೆ.

Post a Comment

0 Comments