ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ ಘಟನೆ ಮೂಡಬಿದ್ರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿಯಾಗಿದ್ದಾನೆ. ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೋಲಿಸರು ಮೂಡಬಿದ್ರೆ ಹೊರವಲಯದ ಕೊಡಂಗಲ್ಲು ಸಮೀಪ ಆರೋಪಿಯ ಕಾರನ್ನು ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಿಂಬಾಲಿಸಿದ್ದರು. ಪೊಲೀಸರು ಹಿಂಬಾಲಿಸುತ್ತಿರುವ ಬಗ್ಗೆ ಅರಿತ ತೌಸೀಪ್ ತನ್ನ ಕಾರನ್ನು ಅತಿ ವೇಗದಲ್ಲಿ ಹಿಮ್ಮುಖವಾಗಿ ಚಲಾಯಿಸಿ ಎಸ್ಕೇಪ್ ಆಗಲು ಯತ್ನಿಸಿದ್ದ. ಈ ನಡುವೆ ಆತುರದಲ್ಲಿ ಚರಂಡಿಗೆ ಬಿದ್ದು ಕಾರು ಸಿಲುಕಿಕೊಂಡಿತು. ಅಲ್ಲಿಂದ ಪರಾರಿಯಾಗಲು ಯತ್ನಿಸಿದ ತೌಸೀಪ್ನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಇದ್ದ ತಲವಾರ್ ಹಾಗೂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

0 Comments