ಬೆಂಗಳೂರು: ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್ನಲ್ಲಿ ಸಂಚರಿಸುತ್ತಿದ್ದ ವೇಳೆ ಯಾರಿಗೂ ಅನುಮಾನ ಬಾರದಂತೆ ಬ್ರೆಡ್ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ ಕೊಕೇನ್ ಇಟ್ಟು ಡ್ರಗ್ ಸಾಗಾಟ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಬ್ರೆಡ್ ನಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಈಕೆ ಮಾದಕ ದ್ರವ್ಯ ಮಾರಾಟ ಜಾಲದ ಕೊಂಡಿ ಎಂದು ಪೋಲಿಸರು ತಿಳಿಸಿದ್ದಾರೆ


0 Comments