Ticker

6/recent/ticker-posts

Ad Code

ಹಾಸ್ಟೆಲ್ ನಲ್ಲಿ ಕಾಲೇಜು ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು

 

ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವೆ ಹಾಸ್ಟೆಲ್ ನಲ್ಲಿ  ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ನಿನ್ನೆ ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ ದಿಶಾ ಕೊನೆಯುಸಿರೆಳೆದಿದ್ದಾರೆ. ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್  ಪ್ರಕರಣ ದಾಖಲಿಸಿದ್ದಾರೆ.

Post a Comment

0 Comments