Ticker

6/recent/ticker-posts

Ad Code

ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆ

 

ಪುತ್ತೂರು: ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.ಬದ್ರುದ್ದೀನ್ ಡಿಕೆ (27) ಮೃತ ಯುವಕ ಎಂದು ಗುರುತಿಸಲಾಗಿದೆ. ಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದು, ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ಹೊರಗಡೆ ಹೋಗುವುದಾಗಿ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ನಡುವೆ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.

 

Post a Comment

0 Comments