Ticker

6/recent/ticker-posts

Ad Code

ಇಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

 

ಇಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ  ನಡೆದಿದೆ. ಸುಳ್ಯ ಸಮೀಪದ ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ, ಖಾಸಗಿ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತ  ಯುವತಿ. ಮೂರು ದಿನಗಳ ಹಿಂದೆ ಪೂಜಾ ಇಲಿ ಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Post a Comment

0 Comments