ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕರೋರ್ವರು ಸಾವನ್ನಪ್ಪಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕ ಸಂಗೀತ್ ಸಾಗರ್ ಮೃತ ವ್ಯಕ್ತಿ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್ ಸಾಗರ್ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು. 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಇಂದು ಕುಂಬಳಕಾಯಿ ಶಾಸ್ತ್ರ ಮಾಡಿ ಕೊನೆಯ ಚಿತ್ರೀಕರಣ ಮಾಡಬೇಕಿತ್ತು ಈ ನಡುವೆ ಸಾವನ್ನಪ್ಪಿರುವುದು ದುರ್ದೈವವಾಗಿದೆ.

0 Comments