ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಕೋಟ್ ಕೆಲವು ಮಹತ್ವದ ವಿಚಾರಗಳನ್ನು ಉಲ್ಲೇಖ ಮಾಡಿದೆ. 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಬಳಿಕ 3 ಸ್ಥಳಗಳಲ್ಲಿ ಬುರುಡೆ ಸಿಕ್ಕಿದೆ. ಆದರೆ ಅದನ್ನು ಹೂಳಲು ಹೇಳಿದವರು ಯಾರು ಎನ್ನುವುದನ್ನು ಪತ್ತೆ ಹಚ್ಚಿಲ್ಲ. ತನಿಖೆ ಮಾಡುವಾಗ ಬುರುಡೆಯನ್ನು ಬೇರೆಯವರು ತಂದಿದ್ದಾರೆ ಎಂದು ಹೇಳಿದ್ದಾನೆ. ಹೀಗಾಗಿ ಈ ಬಗ್ಗೆಯೂ ತನಿಖೆ ನಡೆಯಬೇಕಿದೆ. ಈ ಹಿನ್ನೆಲೆ ಚಿನ್ನಯ್ಯನಿಗೆ 11 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಈ ಮೊದಲು ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. ಅದರ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ 1 ಲಕ್ಷ ರೂ. ಬಾಂಡ್ ಸೇರಿ 11 ಷರತ್ತುಗಳನ್ನು ವಿಧಿಸಿ ನ.25ರಂದು ಜಾಮೀನು ಮಂಜೂರು ಮಾಡಿತ್ತು. ಆ.23ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್‌ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. ಜಾಮೀನು ನೀಡದಿದ್ದರೆ ಮುಂಚಿತ ಶಿಕ್ಷೆಯಂತಾಗುತ್ತದೆ. ಸರ್ಕಾರದ ಆತಂಕಗಳನ್ನು ಷರತ್ತುಗಳ ಮೂಲಕ ತಡೆಗಟ್ಟಬಹುದು. ಹೀಗಾಗಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದು ಬಂದಿದೆ.

0 Comments