ತಿರುವನಂತಪುರ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರ ನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 101 ವಾರ್ಡ್‌ಗಳಲ್ಲಿ 50 ರಲ್ಲಿ ಬಿಜೆಪಿ ಜಯಗಳಿಸಿದೆ. ಈ ಮೂಲಕ ಎಲ್‌ಡಿಎಫ್‌ನ 45 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ. ಆಡಳಿತದಲ್ಲಿರುವ ಎಲ್‌ಡಿಎಫ್ 29 ವಾರ್ಡ್‌ಗಳಲ್ಲಿ ಜಯಗಳಿಸಿದರೆ ಯುಡಿಎಫ್ ಮೈತ್ರಿಕೂಟ 19 ವಾರ್ಡ್‌ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಎರಡು ಕ್ಷೇತ್ರವನ್ನು ಇತರರು ಗೆದ್ದಿದ್ದಾರೆ. ಬಹುಮತಕ್ಕೆ 51 ಸ್ಥಾನಗಳ ಅಗತ್ಯವಿರುವ ಹಿನ್ನೆಲೆಯಲ್ಲಿ ಸ್ವತಂತ್ರರಾಗಿ ನಿಂತು ಜಯಗಳಿಸಿದ ಇಬ್ಬರು ಸದಸ್ಯರ ಜೊತೆ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಕೇರಳದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಆರ್. ಶ್ರೀಲೇಖಾ ಅವರು ತಿರುವನಂತಪುರ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಿಭಾಗದಿಂದ ಗೆದ್ದಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಏರಿದರೆ ಶ್ರೀಲೇಖಾ ಅವರು ಮೇಯರ್ ಆಗಿ ಆಯ್ಕೆಯಾಗುವ ಸಾಧ್ಯತೆಯಿದೆ. 2020ರ ಚುನಾವಣೆಯಲ್ಲಿ ಎಲ್‌ಡಿಎಫ್ 51, ಯುಡಿಎಫ್ 10, ಎನ್‌ಡಿಎ 34, ಇತರರು 5 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

0 Comments