Ticker

6/recent/ticker-posts

Ad Code

ಪೆರ್ಲದಲ್ಲಿ ಡಿ.28ಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

 

ಪೆರ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಜೇಶ್ವರ ಇದರ  ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ। ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ  ವಿನ್‌ಟಚ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ  ಕಾಸರಗೋಡು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಪೆರ್ಲ ವಲಯ, ಶೌರ್ಯ ವಿಪತ್ತು ಘಟಕ ಮತ್ತು ನವಜೀವನ ಸಮಿತಿ ಪೆರ್ಲ ಇವುಗಳ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ.28 ಆದಿತ್ಯವಾರದಂದು ನಡೆಯಲಿದೆ. ಪೆರ್ಲ ವ್ಯಾಪಾರಿ ಸಭಾ ಭವನ ಸಭಾಂಗಣದಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ಗಂಟೆ ತನಕ ಶಿಬಿರ ನಡೆಯಲಿದೆ. ಕಣ್ಣು, ಕಿವಿ, ಮೂಗು, ಗಂಟಲು ವಿಭಾಗ, ಸ್ತ್ರೀರೋಗ, ಚರ್ಮರೋಗ ಮತ್ತು ನರರೋಗ, ಸಾಮಾನ್ಯ ರೋಗ ತಪಾಸಣೆ, ಎಲುಬು ಮತ್ತು ಕೀಲುರೋಗ ವಿಭಾಗಕ್ಕೆ ಸಂಬಂಧಪಟ್ಟ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

Post a Comment

0 Comments