Ticker

6/recent/ticker-posts

Ad Code

ಹೆಜಮಾಡಿಯಲ್ಲಿ ಚಿನ್ನ ಕದ್ದ ವಿಡಿಯೋ ವೈರಲ್ : ತಮಿಳುನಾಡಿನ ಕಳ್ಳಿಯರು ಪುತ್ತೂರಿನಲ್ಲಿ ಸೆರೆ

 

ಉಡುಪಿ: ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ತಮಿಳ್ನಾಡು ಮೂಲದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಪುತ್ತೂರಿನಿಂದ  ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಶೀತಲ್, ಕಾಳಿಯಮ್ಮ ಹಾಗೂ ಮಾರಿ ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸಕ್ಕೆ ಹೋಗಿದ್ದರು. ಅಲ್ಲಿಗೆ ಬಂದ ಈ ಮೂವರು ಕಳ್ಳಿಯರು ಜನಸಂದಣಿಯ ಮಧ್ಯೆಯೇ ಕಮಲ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ಚಿನ್ನದ ಸರ ಕಳವಾಗಿರುವುದು ಗಮನಕ್ಕೆ ಬಂದಾಗ ದೇವಸ್ಥಾನದ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದು, ಅವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂವರು ಅಪರಿಚಿತ ಮಹಿಳೆಯರು ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಡಿಯೋ ವೈರಲ್ ಆಗಿತ್ತು. ಅದರಂತೆ ತನಿಖೆ ನಡೆಸುವ ವೇಳೆಪುತ್ತೂರಿನ ಜನತೆ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಪೊಲೀಸರು ಮೂವರು  ಆರೋಪಿಗಳನ್ನೂ ಪುತ್ತೂರಿನಿಂದ ಸೆರೆ ಹಿಡಿದರು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

Post a Comment

0 Comments