ಕಾಸರಗೋಡು: ರೈಲಿನಿಂದ ಇಳಿದು ರೈಲ್ವೆ ಹಳಿಗಳ ಮೂಲಕ ಪ್ಲಾಟ್‌ಫಾರ್ಮ್‌ಗೆ ಬರುತ್ತಿದ್ದ ಯುವಕನೊಬ್ಬನಿಗೆ ಇನ್ನೊಂದು ಹಳಿ ಮೂಲಕ ಬರುತ್ತಿದ್ದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಡಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿ ಅನ್ಯರಾಜ್ಯ ಕಾರ್ಮಿಕನಾದ ಕೊಡಗು ಮೂಲದ ರಾಜೇಶ್ (35) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಚಲಿಸುತ್ತಿದ್ದ ಗೂಡ್ಸ್ ರೈಲನ್ನು ಕುಂಬಳೆ ನಿಲ್ದಾಣದಲ್ಲಿ ನಿಲ್ಲಿಸಿ ಪರಿಶೀಲನೆ ನಡೆಸಿದಾಗ, ರೈಲಿನ ಕೆಳಗೆ ಸಿಲುಕಿದ್ದ ಮೃತನ ಕಾಲು ಪತ್ತೆಯಾಗಿದೆ. ಆತನ ತಲೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಮೃತದೇಹದ ಅವಶೇಷಗಳನ್ನು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಮೃತದೇಹದ ಮೇಲಿದ್ದ ಶರ್ಟ್‌ನ ಜೇಬಿನಲ್ಲಿ ದೊರೆತ ಆಧಾರ್ ಕಾರ್ಡ್‌ನಿಂದ ಮೃತನ ಗುರುತು ಪತ್ತೆ ಹಚ್ಚಿ ಸಂಬಂಧಿಕರಿಗೆ ಮಾಹಿತಿ ನೀಡಲಾಯಿತು.

0 Comments