ಇಥಿಯೋಪಿಯಾ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ಪ್ರಶಸ್ತಿಯನ್ನು ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರದಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಇಥಿಯೋಪಿಯಾ ಸೇರಿದಂತೆ ಮೂರು ದೇಶಗಳ ಪ್ರವಾಸದಲ್ಲಿದ್ದಾರೆ. ಇಥಿಯೋಪಿಯಾದಲ್ಲಿ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ನೀಡಿ ನಿನ್ನೆ ಗೌರವಿಸಿದ್ದಾರೆ. ಇದು ಭಾರತ-ಇಥಿಯೋಪಿಯಾ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

0 Comments