ತ್ರಿಶೂರು : ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ (30) ಅವರ ಮೃತದೇಹ ಅಪಾರ್ಟ್‌ಮೆಂಟ್‌ವೊಂದರಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಆಗಿರಬೇಕೆಂಬ ಸಂಶಯ ವ್ಯಕ್ತವಾಗಿದೆ. ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ವಿಶ್ವನಾಥ್ ತ್ರಿಶೂರ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವು ಮಲಯಾಳಂ ಚಲನಚಿತ್ರೋದ್ಯಮ ಮತ್ತು ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಸಾವಿಗೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಇಲ್ಲ. ಆದರೂ, ಆರಂಭಿಕ ವರದಿಗಳು ಆರೋಗ್ಯ ಸಮಸ್ಯೆಗಳಿಂದಾಗಿ ಸಾವನ್ನಪ್ಪಿರಬಹುದು ಎಂದು ಸೂಚಿಸುತ್ತವೆ. ಅಖಿಲ್ ಅವರ ತಂದೆ ವಿಶ್ವನಾಥ್ ಇತ್ತೀಚೆಗೆ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

0 Comments