Ticker

6/recent/ticker-posts

Ad Code

ಅನ್ಯ ಜಾತಿಯ ಯುವಕನನ್ನು ಮದುವೆಯಾದ ಕಾರಣಕ್ಕೆ ಗರ್ಭಿಣಿ ಮಗಳನ್ನೇ ಕೊಂದ ತಂದೆ


ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದೆ. ಇನಾಂವೀರಾಪುರ ಗ್ರಾಮದ ಮಾನ್ಯಾ (19) ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ  ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಗರ್ಭಿಣಿ ಎಂಬುದನ್ನೂ ನೋಡದೇ ಪೈಪ್ ಮತ್ತು ಗುದ್ದಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಮಾನ್ಯಾ ಮತ್ತು ವಿವೇಕಾನಂದ ಇಬ್ಬರೂ ಹುಬ್ಬಳ್ಳಿ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಗ ಇನ್ಸ್ಟಾಗ್ರಾಂ ಮೆಸೆಜ್‍ನಿಂದ ಪ್ರೀತಿ ಹುಟ್ಟಿತ್ತು. ಈ ವಿಚಾರ ಎರಡೂ ಕುಟುಂಬಕ್ಕೂ ತಿಳಿದಿತ್ತು. ಇಬ್ಬರ ಪ್ರೀತಿಗೆ ಯುವತಿಯ ಕುಟುಂಬಸ್ಥರು ವಿರೋಧಿಸಿದ್ದರು. ಯುವತಿ ಯಾವುದೇ ಕಾರಣಕ್ಕೂ ವಿವೇಕಾನಂದನನ್ನು ಬಿಟ್ಟು ಬದುವುದಿಲ್ಲ  ಅಂತ ಹಠ ಹಿಡಿದಿದ್ದಳಂತೆ. ಧಾರವಾಡದಲ್ಲಿ ಕೋಚಿಂಗ್‍ಗೆ ಹೋಗಿದ್ದ ವಿವೇಕಾನಂದನ ಬಳಿ ಹೋಗಿ ಮದುವೆಯಾಗದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳಂತೆ. ಹೀಗಾಗಿ ವಿವೇಕಾನಂದ ಮಾನ್ಯಾಳ ಜೊತೆ ಕಳೆದ ಜೂ.19 ರಂದು ಹುಬ್ಬಳ್ಳಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದ. ಈ ಸಮಯದಲ್ಲಿ ಪೊಲೀಸರು ಎರಡು ಕುಟುಂಬ ಕರೆದು ರಾಜಿ ಪಂಚಾಯತಿ ಮಾಡಿದ್ದರು.

ಆದರೆ ಡಿ.21ರ ಸಂಜೆ ಮತ್ತೆ ವಿವೇಕಾನಂದನ ಮನೆ ಮೇಲೆ ದಾಳಿ ಮಾಡಿದ ಪ್ರಕಾಶಗೌಡ ಪಾಟೀಲ್ ಮತ್ತು ಸಂಬಂಧಿಗಳು ಮಾನ್ಯಾ ಮತ್ತು ಮನೆಯಲ್ಲಿದ್ದ ಆಕೆಯ ಅತ್ತೆ ಸೇರಿದಂತೆ ಮೂವರ ಮೇಲೆ ಪೈಪ್ ಮತ್ತು ಗುದ್ದಲಿಯಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಮಾನ್ಯಾಳನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

Post a Comment

0 Comments