ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮ್ಯೂಸಿಕ್ ಸಿಂಗರ್ ಮೈಲಾರಿಯನ್ನು ಮಹಾರಾಷ್ಟ್ರಕ್ಕೆ ತೆರಳುವ ನಡುವೆ ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಮಹಾಲಿಂಗಪುರ ಪೊಲೀಸ್ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಉತ್ತರ ಕರ್ನಾಟಕ ಮೂಲದ ಈತನ ಮೇಲೆ ಮಹಾಲಿಂಗಪುರ ಹೊರವಲಯದ ಲಾಡ್ಜ್ ಒಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಚಿಕ್ಕೋಡಿ ತಾಲೂಕಿನ ಜಾಗನೂರು ಗ್ರಾಮದಲ್ಲಿ ಅ.24 ರಂದು ಹನುಮಂತ ದೇವರ ಓಕುಳಿ ಕಾರ್ಯಕ್ರಮವಿತ್ತು. ಅಂದು ಊರಲ್ಲಿ ಆರ್ಕೆಷ್ಟ್ರಾ ಆಯೋಜಿಸಲಾಗಿತ್ತು. ಅಲ್ಲಿ ಹಾಡಲು ಮೈಲಾರಿ ಬಂದಿದ್ದ. ಅದೇ ಆರ್ಕೆಷ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಅಪ್ರಾಪ್ತೆ ಬಂದಿದ್ದಳು. ಈಕೆಯನ್ನು ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ. ಮ್ಯೂಸಿಕ್ ಮೈಲಾರಿ, ಶಂಕರ್ ಅಥಣಿ, ಸಿಂಗರ್ ದಾನವಿ, ಬೆಂಕಿ ಲತಾ, ಸಿಂಗರ್ ರುಕ್ಮಿಣಿ, ಡಿಜೆ ಮಹಾಂತೇಶ್ ಸೇರಿ ಏಳು ಜನರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ನಡುವೆ ಮೈಲಾರಿ ಬೇರೆ ರಾಜ್ಯಕ್ಕೆ ತೆರಳುವ ನಡುವೆ ಬಂಧಿಸಲಾಗಿದೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು.

0 Comments