Ticker

6/recent/ticker-posts

Ad Code

ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವದ ಕರಪತ್ರ ಬಿಡುಗಡೆ

 

ಉಪ್ಪಳ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮಸ್ಕತ್, ಒಮಾನ್ ಘಟಕ ಹಾಗೂ ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಮಸ್ಕತ್, ಒಮಾನ್ ಘಟಕಗಳ ಆಶ್ರಯದಲ್ಲಿ 2026ರ ಮೇ.8 ರಂದು ಒಮಾನ್ ನ ಮಸ್ಕತ್ ಸಿ.ಬಿ.ಎಫ್.ಸಿ. ಹಾಲ್ ಹೌಶೆರ್ ನಲ್ಲಿ ಅಂತಾರಾಷ್ಟ್ರೀಯ ಕನ್ನಡ ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗಿದೆ. ಇದರ ಕರಪತ್ರವನ್ನು  ಇತ್ತೀಚೆಗೆ ಪೈವಳಿಕೆ ಕಾಯರ್ ಕಟ್ಟೆ ಸರಕಾರಿ ಹೈಸ್ಕೂಲಿನಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು  ಒಮಾನ್ ಘಟಕ ಅಧ್ಯಕ್ಷ ಶಿವಾನಂದ ಕೋಟ್ಯಾನ್ ಕಟಪಾಡಿ, ಧಾರ್ಮಿಕ ಮುಂದಾಳು ಮಹಾಬಲೇಶ್ವರ ಭಟ್ ಎಡಕ್ಕಾನ, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಕಾರ್ಮಿಕ ಪರಿಷತ್ತು ಬೆಂಗಳೂರು ಅಧ್ಯಕ್ಷ ಡಾ.ರವಿಶೆಟ್ಟಿ ಬೈಂದೂರು, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ,  ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments