ಮಂಗಳೂರು : ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಗುಜರಾತಿನ ಆನಂದ ತಾಲೂಕಿನ ಕೈಲಾಸ್ ನಗರಿಯ ಹೀರೇಂದ್ರ ಕುಮಾರ್ ಯಾನೆ ಭರತ್ ಕುಮಾರ್ ಖಡಯಾತ (34) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಕಳೆದ ನ.21ರಂದು ಇದೇ ಪ್ರಕರಣದಲ್ಲಿ ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಪ್ರಕರಣದ ತನಿಖೆ ಮಂದುವರಿಸಿದ ಪ್ರಕರಣದ ತನಿಖಾಧಿಕಾರಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದ ತಂಡ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ ಆಧಾರದ ಮೇಲೆ ಹೀರೇಂದ್ರ ಕುಮಾರ್ನನ್ನು ಡಿ.21ರಂದು ಬಂಧಿಸಿದೆ. ಈತ ಹಣಕ್ಕಾಗಿ ತನ್ನ ಹೆಸರಿನಲ್ಲಿ ಮೊಬೈಲ್ ಸಿಮ್ ತೆಗೆದು ಆರೋಪಿಗೆ ನೀಡಿದ್ದನು. ಈತನನ್ನು ಕೂಡ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0 Comments