ಕೇಂದ್ರ ಸರ್ಕಾರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (90) ಅಲ್ಪಕಾಲದ ಅನಾರೋಗ್ಯದಿಂದ ಇಂದು ಲಾತೂರ್ ನಲ್ಲಿ ನಿಧನ ಹೊಂದಿದ್ದಾರೆ. ಅವರು ಪುತ್ರ ಶೈಲೇಶ್ ಪಾಟೀಲ್, ಸೊಸೆ ಅರ್ಚನಾ (ಬಿಜೆಪಿ ನಾಯಕಿ) ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಲೋಕಸಭೆಯ ಮಾಜಿ ಸ್ಪೀಕರ್ ಆಗಿದ್ದಅವರು ಹಿಂದಿನ ಯುಪಿಎ ಸರ್ಕಾರದಲ್ಲಿ ಗೃಹ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಪಾಟೀಲ್ ಲಾತೂರ್ ಲೋಕಸಭಾ ಸ್ಥಾನವನ್ನು ಏಳು ಬಾರಿ ಗೆದ್ದಿದ್ದರು.ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ಹಲವು ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

0 Comments