ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್‌ಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಪುಟ್ಟ ಕಂದಮ್ಮನೊಂದಿಗೆ ವಾಸಿಸುತ್ತಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 Comments