Ticker

6/recent/ticker-posts

Ad Code

ಬೃಹತ್ ಸಂಖ್ಯೆಯಲ್ಲಿ ಸುವರ್ಣ ಸೌಧ ಮುತ್ತಿಗೆ : ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

 

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಸುವರ್ಣಸೌಧ ಕಡೆ  ಪಾದಯಾತ್ರೆ ಹೊರಟಿದ್ದು  ಪ್ರತಿಭಟನಾ ಸ್ಥಳದಿಂದ ಹೈವೇವರೆಗೂ ಬಂದು  ಬೆಳಗಾವಿ ಸರ್ವಿಸ್ ರಸ್ತೆ ಮೇಲೆಯೇ ಸಾಗಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು. ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

Post a Comment

0 Comments