ಕಾಸರಗೋಡು: ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕದಾದ್ಯಂತ ಜನ ಜೀವನ ತತ್ತರಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ ಕರ್ನಾಟಕದ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು ವಿಜಯಪುರದಲ್ಲಿ ತಾಪಮಾನ 6 ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

0 Comments