ವಿಟ್ಲ: ವಿಟ್ಲ ಭಾಗದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ಮಿ ಕಾರು ಮತ್ತು ಪಕಳಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಳಿಯ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಈ ಭೀಕರ ರಸ್ತೆ ಅಪಘಾತದಲ್ಲಿ ಒರ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.
ಮೃತರನ್ನು ಮೈರ ನಿವಾಸಿ ಮೋನಪ್ಪ ಕುಲಾಲ್ ಎಂದು ಗುರುತಿಸಲಾಗಿದೆ. ಒಮ್ನಿಯಲ್ಲಿದ್ದ ಲಲಿತಾ ಮತ್ತು ರಮಣಿ ಎಂಬವರಿಗೆ ಗಂಭೀರ ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ತಲುಪಿಸಿದರು. ಈ ನಡುವೆ ಮೋನಪ್ಪ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

0 Comments