ವಿಟ್ಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿಟ್ಲ ತಾಲೂಕಿನ ಕೇಪು ವಲಯದ ವತಿಯಿಂದ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಕನ್ಯಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಇವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಸದಸ್ಯರಿಗೆ ಅತಿ ಕಡಿಮೆ ಬಡ್ಡಿಯಲ್ಲಿ ಸಾಲ ಸಿಗುತ್ತಾ ಇದೆ. ಇದರಿಂದ ಸದಸ್ಯರು ಲೇವಾದೇವಿ ಅವರಿಂದ ಹೆಚ್ಚು ಬಡ್ಡಿ ಮೂಲಕ ಸಾಲ ಪಡೆಯುವುದನ್ನು ತಪ್ಪಿಸಲು ಸಹಕಾರಿಯಾಗಿದೆ ಹಾಗೂ ಯೋಜನೆ ಮೂಲಕ ಅನೇಕ ಜನಪರ ಕೆಲಸಗಳ ಮೂಲಕ ಸದಸ್ಯರು ಸ್ವಾವಲಂಬಿಗಳಾಗಿದ್ದಾರೆ ಎಂದು ತಿಳಿಸಿದರು. ಒಡಿಯೂರು ಶ್ರೀ ಗುರುದೇವ ದತ್ತ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಇದರ ಸದುಪಯೋಗವನ್ನು ಪಡಿಸುವಂತೆ ಸದಸ್ಯರಿಗೆ ಮಾಹಿತಿ ನೀಡಿದರು. ವಿಟ್ಲ ತಾಲೂಕಿನ ಯೋಜನಾಧಿಕಾರಿಯವರಾದ ಸುರೇಶ ಗೌಡ ಗ್ರಾಮಾಭಿವೃದ್ಧಿ ಯೋಜನೆ ನಡೆದು ಬಂದ ಹಾದಿ ಹಾಗೂ ಬ್ಯಾಂಕು ಮೂಲಕ ಯೋಜನೆ ಸದಸ್ಯರಿಗೆ ಸಾಲ ಸೌಲಭ್ಯ ಒದಗಿಸಿದ ಬಗ್ಗೆ ಹಾಗೂ ಇನ್ನಿತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.. ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ರವರು ಸಂದರ್ಭೋಚಿತವಾಗಿ ಮಾತನಾಡಿದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ ಶ್ರೀಧರ ಶೆಟ್ಟಿ ಗುಬ್ಯ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮಾಣಿಲ ಒಕ್ಕೂಟದ ಸೇವಾ ಪ್ರತಿನಿಧಿ ಗುಲಾಬಿ ವರದಿ ಮಂಡಿಸಿದರು.ವಲಯದ ಮೇಲ್ವಿಚಾರಕ ಚಂದ್ರಶೇಖರ್ ಸ್ವಾಗತಿಸಿ ದಿನೇಶ್ ವಂದಿಸಿದರು.ರೇಣುಕಾ ಕಣಿಯೂರು ನಿರೂಪಿಸಿದರು.

0 Comments