Ticker

6/recent/ticker-posts

Ad Code

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ

 

ಸುಳ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಭಾರೀ ವಿರೋಧ ವ್ಯಕ್ತವಾಗಿದೆ.

ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನುಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದಿದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ. ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿರುವುದರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮೀಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್‌ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ.

ಇದು ಹಿಂದೂ ಧರ್ಮಿಯರ ಕೆಂಗಣ್ಣಿಗೆ ಗುರಿಯಾಗಿದೆ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರನ್ನು ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡುವುದು ಖಂಡನೀಯವೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಚಿದಾನಂದ ಕಂದಡ್ಕ ಮತ್ತು ಸದಸ್ಯರಿಂದ ದೂರು ನೀಡಲಾಗಿದೆ.

Post a Comment

0 Comments