ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ನೀಡಿ 35 ಲಕ್ಷ ವಂಚಿಸಿದ ಆರೋಪದ ಮೇಲೆ ಮೇಟಗಳ್ಳಿ ಪೊಲೀಸ್ ಠಾಣೆ ಪೇದೆ ಪಿ.ಜೆ.ರಾಜು ಹಾಗೂ ಅವರ ಪತ್ನಿ ನಂದಿನಿ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆಗೆ ಒಳಗಾದ ಮಹಾಲಕ್ಷ್ಮಿ, ಮಂಜುಳಾ ಹಾಗೂ ಸಿದ್ದೇಶ್ ಎಂಬುವವರು ಪ್ರಕರಣ ದಾಖಲಿಸಿದ್ದಾರೆ. 2022 ರಲ್ಲಿ ಪೇದೆ ರಾಜುರವರು ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಮಹಾಲಕ್ಷ್ಮಿ, ಮಂಜುಳಾ ಹಾಗೂ ಸಿದ್ದೇಶ್ ರವರ ಬಳಿ ಹಂತ ಹಂತವಾಗಿ 35 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ.

0 Comments