ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ತಾತ್ಕಾಲಿಕವಾಗಿ ನಿರ್ಮಿಸಿದ್ದ ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದು ಬಾಲಕಿಯೋರ್ವೆ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಗುವನ್ನು ಮನುಶ್ರೀ (4) ಎಂದು ಗುರುತಿಸಲಾಗಿದೆ. ತಾಯಿ ಮಮತಾ (30) ಮತ್ತು ಇಬ್ಬರು ಮಕ್ಕಳಾದ ಶ್ರೀಯಾನ್ (6) ಮತ್ತು ಶೇಖರ್ (5) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡ ನಿರ್ಮಾಣಕ್ಕಾಗಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಭೋರಗಿ ಗ್ರಾಮದವರನ್ನು ಕರೆತರಲಾಗಿತ್ತು. ಅವರಿಗಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದಿವೆ. ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ನಿರ್ಮಾಣ ಕಾರ್ಯಗಳನ್ನು ನಡೆಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ

0 Comments