Ticker

6/recent/ticker-posts

Ad Code

ಜಿಲ್ಲಾ ನ್ಯಾಯಾಲಯ ಕಟ್ಟಡದಲ್ಲಿ ಬಾಂಬ್ ಬೆದರಿಕೆ : ಕ್ಷಿಪ್ರ ತನಿಖೆ ಆರಂಭ

 

ಕಾಸರಗೋಡು: ವಿದ್ಯಾನಗರದಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ  ಬಾಂಬು ಇರಿಸಿರುವುದಾಗಿ ಇಮೇಲ್ ಸಂದೇಶ ಕಳುಹಿಸಲಾಗಿದೆ. ಬೆದರಿಕೆಯ ಮಾಹಿತಿ ಪಡೆದ ಪೊಲೀಸರು ಮತ್ತು ಬಾಂಬ್‌ ಶ್ವಾನದಳ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ  ತನಿಖೆ ಆರಂಭಿಸಿದೆ. ಗುರುವಾರ ಮಧ್ಯಾಹ್ನ 1 ರಿಂದ 2 ಗಂಟೆಯೊಳಗೆ ಬಾಂಬ್ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆಯಲ್ಲಿ ತಿಳಿಸಲಾಗಿದೆ. ಘಟನೆಯ ನಂತರ ನ್ಯಾಯಾಲಯದ ನೌಕರರನ್ನು ನ್ಯಾಯಾಲಯದ ಕಟ್ಟಡದಿಂದ ಹೊರಗಡೆ ಕಳುಹಿಸಲಾಗಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ. ನ್ಯಾಯಾಲಯದ ಕಟ್ಟಡದ ಪ್ರಮುಖ ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ.

Post a Comment

0 Comments