ಕಾಸರಗೋಡು ನಗರದಲ್ಲಿ 32 ವರ್ಷಗಳಿಂದ ಸಕ್ರಿಯವಾಗಿ ಕಾರ್ಯವೆಸಗುತ್ತಿರುವ ಬಾಲ ಭವನ ಆಂಗ್ಲ ಮಾಧ್ಯಮ ಸಂಸ್ಥೆಯ 32ನೇ ವಾರ್ಷಿಕೋತ್ಸವ ಶಾಲೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಗುರುದತ್ ಪೈ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಠಾಣೆಯ ಇನ್ಸ್ಪೆಕ್ಟರ್ ಆಫ್ ಪೊಲೀಸ್ ನಳಿನಾಕ್ಷನ್ ಮತ್ತು ಮುಖ್ಯೋಪಾಧ್ಯಾಯಿನಿ ದೀಪವನ್ನು ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಕಾಸರಗೋಡು ನಗರ ಸಭೆಯ ಸದಸ್ಯ ರವೀಂದ್ರ ಪೂಜಾರಿ, ಉಪಾಧ್ಯಕ್ಷ ಮಹಮ್ಮದ್ ಅಸ್ಲಾಂ, ಸಂಸ್ಥೆಯ ಸಲಹೆಗಾರ ಡಾಕ್ಟರ್ ಕೆ ಏನ್ ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶಾಲಾ ಮಕ್ಕಳಿಂದ ಪ್ರಾರ್ಥನೆ ಜರುಗಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲೀಲಾವತಿ ಕೆ ನಾಯರ್ ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು. ಪವಿಲ ಟೀಚರ್ ಸ್ವಾಗತಿಸಿ, ರಕ್ಷಕ ಶಿಕ್ಷಕ ಸಂಘದ ಖಜಾಂಜಿ ಪ್ರಕಾಶ್ ವಂದಿಸಿದರು.. ಸುಶ್ಮಿತಾ ಟೀಚರ್ ನಿರೂಪಿಸಿದರು. ದೀಪ್ತಿ ಟೀಚರ್ ಮತ್ತು ಸುದೀಪ ಟೀಚರ್ ಸಹಕರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನ ಕಾರ್ಯಕ್ರಮ ಜರುಗಿತು. ಶಾಲಾ ಅಧ್ಯಾಪಿಕೆಯರು ವಿವಿಧ ಮನೋರಂಜನಾ ತಂಡದ ನೇತೃತ್ವ ವಹಿಸಿದರು.

0 Comments