Ticker

6/recent/ticker-posts

Ad Code

ಬಿಜೆಪಿ ಆಡಳಿತವಿರುವ 5 ಪಂಚಾಯಿತಿಗಳಲ್ಲಿ ಉತ್ತಮ ಆಡಳಿತ ನೀಡುವ ಶ್ರಮ ಅಗತ್ಯ : ವಿ.ಕೆ. ಸಜೀವನ್

ಕಾಸರಗೋಡು : ಜಿಲ್ಲೆಯಲ್ಲಿ ಬಿಜೆಪಿ ಆಡಳಿತವಿರುವ 5 ಪಂಚಾಯಿತಿಗಳಲ್ಲಿ ಉತ್ತಮ ಆಡಳಿತ ನೀಡಲು ಜನಪ್ರತಿನಿಧಿಗಳು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಕೋಶ ಸಂಯೋಜಕ ವಿ.ಕೆ. ಸಜೀವನ್ ಹೇಳಿದರು. ಅವರು  ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿಯಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಮೊದಲ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿ ಸರ್ಕಾರದ ಜನ ಕಲ್ಯಾಣ ಯೋಜನೆಗಳನ್ನು ಕೇರಳದಲ್ಲಿ ಜಾರಿಗೆ ತಂದರೆ ಬಿಜೆಪಿ ರಾಜಕೀಯ ಲಾಭ ಗಳಿಸುತ್ತದೆ ಎಂದು ಪಿಣರಾಯಿ ವಿಜಯನ್ ಸರ್ಕಾರ ಭಯಪಡುತ್ತಿದೆ. ಆದ್ದರಿಂದ, ಅನೇಕ ಕೇಂದ್ರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿಲ್ಲ ಅಥವಾ ಬೇರೆ ಬೇರೆ ಹೆಸರುಗಳೊಂದಿಗೆ ಪರಿಚಯಿಸಲಾಗುತ್ತಿದೆ. ನರೇಂದ್ರ ಮೋದಿ ಅವರ ಕಲ್ಯಾಣ ಯೋಜನೆಗಳ ಫಲಾನುಭವಿಗಳಾಗಲು ಗರಿಷ್ಠ ನಾಗರಿಕರಿಗೆ  ತಲುಪಿಸಲು ಬಿಜೆಪಿ ಜನಪ್ರತಿನಿಧಿಗಳು ಮುಂದೆ ಬರಬೇಕು ಮತ್ತು ಜನ ಕಲ್ಯಾಣ ಯೋಜನೆಗಳ ಪ್ರಚಾರಕರಾಗಬೇಕು ಎಂದು ವಿ.ಕೆ.ಸಜೀವನ್ ಒತ್ತಾಯಿಸಿದರು. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್.ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಪ್ರಾದೇಶಿಕ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ಕಾಶಿನಾಥ್, 'ಜನಪ್ರತಿನಿಧಿಗಳು ಮತ್ತು ಸಂಘಟನಾ ಧ್ಯೇಯ' ಎಂಬ ವಿಷಯ ಮಂಡಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.ಸುನಿಲ್, ಮನುಲಾಲ್ ಮೇಳತ್, ಜಿಲ್ಲಾ ಉಪಾಧ್ಯಕ್ಷ ಪಿ.ರಮೇಶ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ದೇಲಂಪಾಡಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿ ಪ್ರಮೀಳಾ ಸಿ.ನಾಯಕ್, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಮಧೂರು ಗ್ರಾಮ ಪಂಚಾಯಿತಿ ಸುಜ್ಞಾನಿ ಶಾನ್ ಭಾಗ್, ಬದಿಯಡ್ಕ ಗ್ರಾಮ ಪಂಚಾಯಿತ್ ಅಧ್ಯಕ್ಷ ಡಿ.ಶಂಕರ, ಕಾರಡ್ಕ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಎಂ.ಜನನಿ, ಕುಂಬ್ಡಾಜೆ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಎನ್. ಯಶೋದಾ ಹಾಗೂ ಬೆಳ್ಳೂರು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಮಾಲಿನಿ ಮಾತನಾಡಿದರು.

Post a Comment

0 Comments