Ticker

6/recent/ticker-posts

Ad Code

ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮ

 

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ತೋಟದ ಮೇಲೆ ಬಿದ್ದ ಪರಿಣಾಮ 900 ಕ್ಕೂ ಹೆಚ್ಚು ಅಡಿಕೆ ಸಸಿಗಳು ಸುಟ್ಟು ಭಸ್ಮವಾದ ಘಟನೆ ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ಮಂಗಳವಾರ ನಡೆದಿದೆ. ತೋಟವು ಬೂಡಿಯಾರು ನಿವಾಸಿ ಗಣೇಶ್ ರೈ ಅವರಿಗೆ ಸೇರಿದ್ದು, ಸುಮಾರು ಒಂದು ವರ್ಷದ ಹಿಂದೆ ನೆಟ್ಟಿದ್ದ ಸಸಿಗಳು ಚೆನ್ನಾಗಿ ಬೆಳೆದು ನಿಂತಿದ್ದವು. ಮಧ್ಯಾಹ್ನದ ವೇಳೆಗೆ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಬಿದ್ದಿದ್ದು ತಂತಿಯಿಂದ ಬೆಂಕಿ ಹೊತ್ತಿಕೊಂಡಿದ್ದು, ಅದು ಕ್ಷಣ ಮಾತ್ರದಲ್ಲಿ ತೋಟದಾದ್ಯಂತ ಹರಡಿ, ಸಸಿಗಳನ್ನು ಸಂಪೂರ್ಣವಾಗಿ ಸುಟ್ಟುಹಾಕಿದೆ. ಘಟನೆಯಲ್ಲಿ ಸುಮಾರು 5 ಲಕ್ಷ ರೂ.ಗಳಿಗೂ ಹೆಚ್ಚು ನಾಶ ನಷ್ಟ ಸಂಭವಿಸಿದೆ  ಎಂದು ಅಂದಾಜಿಸಲಾಗಿದೆ.

Post a Comment

0 Comments