ಕಾರವಾರ: ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಹೊತ್ತಿ ಉರಿದು ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿರುವ ಭೀಕರವಾದ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನ ನಂಬರ್ ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದ್ದು, ಇದೇ ಕಾರಣದಿಂದ ಕಾರು ಮತ್ತು ಅದರ ಸವಾರರ ಗುರುತು ಪತ್ತೆ ಹಚ್ಚಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಿದ್ದಾಪುರ ಮೂಲದವರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, ಈ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳದಲ್ಲಿ ಹೊನ್ನಾವರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

0 Comments