Ticker

6/recent/ticker-posts

Ad Code

ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಗೆ ಕಾರು ಡಿಕ್ಕಿ : ಮಗು ಸಹಿತ ಮೂವರು ಮೃತ್ಯು

 

ಶಿವಮೊಗ್ಗ: ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ  ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಮೃತದೇಹಗಳನ್ನು  ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Post a Comment

0 Comments