ಬೆಂಗಳೂರು: ಶಬರಿಮಲೆ ದರ್ಶನಗೈದು ಹಿಂತಿರುಗುತ್ತಿದ್ದ ಅಯ್ಯಪ್ಪ ಭಕ್ತರಿದ್ದ ವಾಹನವು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ವರ್ಷದ ಬಾಲಕಿ ಸಹಿತ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ಕೊಪ್ಪಳದಲ್ಲಿ ಸಂಭವಿಸಿದೆ. ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳಾದ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28) ಮೃತರು. ಗಾಯಗೊಂಡ ಶ್ರೀನಿವಾಸ್, (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಹುಲಿಗಪ್ಪ (32), ರಾಕೇಶ್ (24), ತಿರುಪತಿ (33), ಶ್ರೀನಿವಾಸ್, (32) ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಬರಿಮಲೆ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಕ್ರೂಸರ್ ಗಾಡಿಯಲ್ಲಿ ಹತ್ತು ಜನ ಇದ್ದರು.

0 Comments