Ticker

6/recent/ticker-posts

Ad Code

ಡಿವೈನ್ ಪಾರ್ಕ್ ನ ಸಂಸ್ಥಾಪಕ ಡಾಕ್ಟರ್‌ಜೀ ಅಸ್ತಂಗತ

 ಉಡುಪಿ:  ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಜ.7 ರಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ  ಕನಸನ್ನು ನನಸಾಗಿಸುವಲ್ಲಿ ಕಳೆದ ಸುಮಾರು ಐವತ್ತು ವರ್ಷಗಳಿಂದ ಡಿವೈನ್ ಪಾರ್ಕ್ ಮೂಲಕ ಶ್ರಮಿಸುತ್ತಿದ್ದ ಇವರು ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದರು. ವೃತ್ತಿಯಲ್ಲಿ ವೈದ್ಯರಾದ ಇವರು ಸುಮಾರು ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಸಮಾಜಕ್ಕೆ ಮತ್ತು ರಾಷ್ಟ್ರಕ್ಕೆ ಒಳಿತು ಮಾಡುವ ನಿಟ್ಟಿನಿಂದ ಪ್ರಾರಂಭಿಸಿ ನಾಡಿಗೆ ಸೇವೆ ಸಲ್ಲಿಸುತ್ತಿದ್ದು, ಇವರಿಗೆ  ದೇಶ-ವಿದೇಶಗಳಲ್ಲಿ ಲಕ್ಷಾಂತರ ಮಂದಿ ಭಕ್ತರು, ಅನುಯಾಯಿಗಳಿದ್ದಾರೆ. ಅವರೆಲ್ಲರೂ ಅಕ್ಕರೆಯಿಂದ ಡಾಕ್ಟರ್‌ಜೀ ಎಂದೇ ಇವರನ್ನು ಕರೆಯುತ್ತಿದ್ದರು. ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್‌ (ಯೋಗಬನ) ಸ್ಥಾಪಿಸಿದ ಇವರು ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.

Post a Comment

0 Comments