Ticker

6/recent/ticker-posts

Ad Code

ಮಂಗಳೂರಿನಲ್ಲಿ ಕನ್ನಡ ಭವನ ನಿರ್ಮಿಸಲು ಸ್ಥಳ ಮಂಜೂರು : ಸಮಾಲೋಚನಾ ಸಭೆ

 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ  ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ   ಡಾ. ಮಂಜುನಾಥ ರೇವಣಕರರ ಹಾಗೂ ಘಟಕದ ಪದಾಧಿಕಾರಿಗಳ ಸತತ ಪ್ರಯತ್ನದ ಫಲವಾಗಿ ಘಟಕಕ್ಕೆ ಕನ್ನಡ ಭವನ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯು  50 ಸೆಂಟ್ಸ್ ಸ್ಥಳವನ್ನು ಮಂಜೂರು ಮಾಡಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹೋಬಳಿಯ ತಿರುವೈಲು ಗ್ರಾಮದಲ್ಲಿರುವ ಈ ಸ್ಥಳದಲ್ಲಿ ಶೀಘ್ರವಾಗಿ ಕಟ್ಟಡ ಕಾಮಗಾರಿಯನ್ನು ಆರಂಭಿಸುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರ ಸಮ್ಮುಖದಲ್ಲಿ ನಡೆದ ಗಣ್ಯರ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಶ್ರೀ ಪ್ರದೀಪ ಕುಮಾರ ಕಲ್ಕೂರ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್, ಡಾ. ಪ್ರಭಾಕರ ಜೋಷಿ, ಡಾ. ಮಂಜುನಾಥ ರೇವಣಕರ್ ಹಾಗೂ  ಅನೇಕ ಗಣ್ಯರು ಉಪಸ್ಥಿತರಿದ್ದರು.

Post a Comment

0 Comments