Ticker

6/recent/ticker-posts

Ad Code

ಆಡಂಬರದ ಕಾರುಗಳಲ್ಲಿ ಬೆಟ್ಟಂಪಾಡಿ, ಇರ್ದೆ, ರೆಂಜ, ಆರ್ಲಪದವು ಪರಿಸರದಲ್ಲಿ ಮಾದಕ ವಸ್ತು ಮಾರಾಟ ; ನಾಲ್ವರ ಸೆರೆ

ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ, ಆರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಹಚ್ಚಲಾಗಿದೆ. ಪುತ್ತೂರು ಗ್ರಾಮಾಂತರ ಠಾಣಾ ಪೋಲಿಸರ ಕಾರ್ಯಾಚರಣೆಯಲ್ಲಿ ಆರೋಪಿಗಳಾದ ಮೊಹಮ್ಮದ್ ಹರ್ಷದ್ (33), ಪುತ್ತೂರು, ಮಹಮ್ಮದ್ ಆರೀಶ್ (31)ಪುತ್ತೂರು, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) ಪುತ್ತೂರು ಎಂಬವರುಗಳನ್ನು ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ ಅಂದಾಜು ರೂ. 50,000 ಮೌಲ್ಯದ 6.39ಗ್ರಾಂ ಎಂಡಿಎಂಎ, 0.87 ಗ್ರಾಂ ಗಾಂಜಾ , ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಅಂದಾಜು ರೂ ಆರು ಲಕ್ಷ ಮೌಲ್ಯದ 2 ಕಾರುಗಳನ್ನು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಲಾಗಿದೆ. ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Post a Comment

0 Comments