Ticker

6/recent/ticker-posts

Ad Code

ಬಾಲಕನ ಅಸಹಜ‌ ಸಾವಿನಲ್ಲಿ ಶಂಕೆ : ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ಮರಣೋತ್ತರ ವರದಿ

ಬೆಳ್ತಂಗಡಿ: ಧನು ಮಾಸ ಪೂಜೆಯ ಕೊನೆಯ ದಿನವಾದ ನಿನ್ನೆ ಪ್ರಾತಃಕಾಲ ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್  ಆಸ್ಪತ್ರೆಯಲ್ಲಿ ನಡೆಸಲಾಗಿಯಿತು. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ ಬಲವಾದ ಮೂರು ಹೊಡೆತಗಳು ಬಿದ್ದಿವೆ. ಅರೆಪ್ರಜ್ಞಾವಸ್ಥೆಯಲ್ಲಿ ಆತ ಕೆರೆಗೆ ಬಿದ್ದಿರಬೇಕೆಂದು ತಜ್ಞರು ಸಂಶಯಿಸಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿರುವುದು ಮರಣೋತ್ತರ ಪರೀಕ್ಷೆಯಲ್ಲಿ ವರದಿಯಾಗಿದೆ. ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿಯವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

Post a Comment

0 Comments