ಬದಿಯಡ್ಕ : ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ನ ಸದಸ್ಯರಾಗಿದ್ದು ಜನಪ್ರತಿನಿಧಿಗಳಾಗಿ ಆಯ್ಕೆಯಾದವರಿಗೆ ಬ್ಯಾಂಕ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ನೀರ್ಚಾಲು ಮುಖ್ಯ ಕಚೇರಿಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗಣಪತಿ ಪ್ರಸಾದ್ ಅಧ್ಯಕ್ಷತೆ ವಹಿಸಿದರು. ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರಾಗಿದ್ದು ವಿವಿಧ ರಾಜಕೀಯ ಪಕ್ಷಗಳಿಂದ  ಸ್ಪರ್ಧಿಸಿ ಜನಪ್ರತಿನಿಧಿಗಳಾದವರಿಗೆ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಪಾಧ್ಯಕ್ಷ ಅವಿನಾಶ್ ವಿ ರೈ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರು, ಬ್ಯಾಂಕ್ ಸಿಬ್ಬಂದಿಗಳು ನೇತೃತ್ವ ವಹಿಸಿದರು. ಬ್ಯಾಂಕ್ ನಿರ್ದೇಶಕಿ ರಮ್ಯ ದರ್ಬೆತ್ತಡ್ಕ ವಂದಿಸಿದರು