ಪೆರ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಂಜೇಶ್ವರ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಜ್ಞಾನ ವಿಕಾಸ ಕೇಂದ್ರಗಳು, ಶೌರ್ಯ ವಿಪತ್ತು ಘಟಕ ಮತ್ತು ವೈಶಾಲಿ ನವಜೀವನ ಸಮಿತಿ, ಪೆರ್ಲ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಜರಗಿತು. ವೇದಮೂರ್ತಿ ಹರಿನಾರಾಯಣ ಮಯ್ಯ ಕುಂಬಳೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿದರು. ಒಕ್ಕೂಟಗಳ ವಲಯ ಅಧ್ಯಕ್ಷ ಶ್ರೀಧರ ಮಣಿಯಾಣಿ ಅಧ್ಯಕ್ಷತೆವಹಿಸಿದ್ದರು
ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನಿದೇರ್ಶಕ ಬಾಬು ನಾಯ್ಕ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಬ್ಯಾಗ್ ವಿತರಿಸಿ ಮಾತನಾಡಿದರು. ಇಡಿಯಡ್ಕ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸದಾನಂದ ಶೆಟ್ಟಿ ಕುದ್ವ, ಡಾ। ಸ್ವಪ್ನ ಜಯಗೋವಿಂದ ಉಕ್ಕಿನಡ್ಕ, ಜನಜಾಗೃತಿ ವೇದಿಕೆ ಪೆರ್ಲ ವಲಯ ಅಧ್ಯಕ್ಷ ಬಿ.ಪಿ ಶೇಣಿ, ವಿಪತ್ತು ನಿರ್ವಹಣಾ ಘಟಕ ಪೆರ್ಲ ವಲಯ ಮಾಸ್ಟರ್ ಸುರೇಂದ್ರ ಶೇಣಿ, ವೈಶಾಲಿ ನವಜೀವನ ಸಮಿತಿ, ಪೆರ್ಲ ವಲಯ ಅಧ್ಯಕ್ಷ ಜಗದೀಶ್, ಪರ್ತಾಜೆ, ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶಶಿಕಲಾ ಸುವರ್ಣ ಹಾಗೂ ವಿವಿಧ ಒಕ್ಕೂಟಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾದಕ ವ್ಯಸನ ಮುಕ್ತರಾದ ನವಜೀವನ ಸಮಿತಿ ಸದಸ್ಯರನ್ನು ಗೌರವಿಸಲಾಯಿತು. ಹರಿನಾಥ ಪೆರ್ಮುದೆ ಪ್ರಾರ್ಥನೆಗೈದರು. ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ.ಧರ್ಮತ್ತಡ್ಕ ಸೇವಾ ಪ್ರತಿನಿಧಿ ಚಂದ್ರಾವತಿ ವಂದಿಸಿದರು.ಜಯ ಮಣಿಯಂಪಾರೆ ನಿರೂಪಿಸಿದರು. ಬೆಳಗ್ಗೆ ಶ್ರೀ ಅಯ್ಯಪ್ಪ ಸ್ವಾಮೀ ಭಜನಾ ಮಂದಿರ, ಬಣ್ಣುತ್ತಡ್ಕ ಇವರಿಂದ ಭಜನೆ ಸಂಕೀರ್ತನೆ ನಡೆಯಿತು ಬಳಿಕ ಶ್ರೀಧರ ಭಟ್ ಸಜಂಗದ್ದೆ ನೇತೃತ್ವದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಒಕ್ಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.


.jpeg)
0 Comments