ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯೋರ್ವನನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ ಒಣಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಮನೆಗಳನ್ನು ದೂರದಿಂದಲೇ ಪರಿಶೀಲನೆ ಮಾಡಿ, ನಂತರ ಯಾರು ಇಲ್ಲದ ವೇಳೆ ನುಗ್ಗಿ ಒಳ ಉಡುಪುಗಳನ್ನು ಕದ್ದೊಯ್ಯುತ್ತಿದ್ದ. ಬಳಿಕ ಅವುಗಳನ್ನು ಧರಿಸಿ ಫೋಟೋ ತೆಗೆದುಕೊಂಡು ವಿಕೃತ ಆನಂದ ಪಡುತ್ತಿದ್ದ ಎಂದು ತಿಳಿದುಬಂದಿದೆ.
ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವಿಕೃತ ಕಾಮಿ ಅಮಲ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಕದ್ದ ಒಳ ಉಡುಪುಗಳನ್ನು ಧರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿರುವುದು ಮೊಬೈಲ್ನಲ್ಲಿ ಪತ್ತೆಯಾಗಿದೆ. ಅಮಲ್ ವಾಸವಿದ್ದ ಮನೆಯಲ್ಲಿಯೂ ಮಹಿಳೆಯರ ಒಳ ಉಡುಪುಗಳ ಸಂಗ್ರಹ ಕಂಡುಬಂದಿದೆ. ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

0 Comments