Ticker

6/recent/ticker-posts

Ad Code

ಶಬರಿಮಲೆ ತೆರಳಿದ್ದ ಯುವಕ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ನಡುವೆ  ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು  ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಮೃತರು  ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಈ  ದುರ್ಘಟನೆ ನಡೆದಿದೆ.

 ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ  ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದರೆಂದು  ತಿಳಿದು ಬಂದಿದೆ. ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

Post a Comment

0 Comments