Ticker

6/recent/ticker-posts

Ad Code

ಫೆ. 22 ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" : ಸಿದ್ಧತೆ ಆರಂಭ

 

ದುಬೈ : ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22 ರಂದು ನಡೆಯಲಿದೆ. ನಗರದ ಗಿಸಾಸ್ ನ ಎತಿಸಲಾತ್ ಮೈದಾನದಲ್ಲಿ ಬೆಳಿಗ್ಗೆ ಒಂಬತ್ತರಿಂದ ರಾತ್ರಿ ಏಳರ ವರೆಗೆ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಯುಎಇಯಲ್ಲಿ ಇರುವ ಎಲ್ಲಾ ಬಂಟ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೆ ಸಾಕ್ಷಿಯಾಗಬೇಕು ಎಂದು ಯುಎಇ ಬಂಟ್ಸ್ ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಮತ್ತು ಸ್ಪೋರ್ಟ್ಸ್ ನ ಸಂಘಟಕರಾದ ವಿವೇಕ್ ಶೆಟ್ಟಿ, ಪ್ರಸಾದ್ ಶೆಟ್ಟಿ, ದಿನಕರ ಶೆಟ್ಟಿ ಉಪಸ್ಥಿತರಿದ್ದರು.

Post a Comment

0 Comments