ಬದಿಯಡ್ಕ: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಅವರು ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಅವರನ್ನು ಅಭಿನಂದಿಸಿದರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ೨ ಕೋಟಿ ರೂ ವೆಚ್ಚದಲ್ಲಿ ಬದಿಯಡ್ಕದ ಕಯ್ಯಾರರ ಊರಿನಲ್ಲಿ ನಿರ್ಮಿಸಲಾದ ಕಯ್ಯಾರ ಭವನದ ಉದ್ಘಾಟನೆಯ ಕುರಿತು ಅಧ್ಯಕ್ಷರೊಂದಿಗೆ ಚರ್ಚಿಸಿ, ಕಯ್ಯಾರರ ಭವನ ರಸ್ತೆಯ ಡಾಮರೀಕರಣದ ಬಗ್ಗೆ ಚರ್ಚಿಸಿದರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ| ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಶುಭಕೋರಿದರು. ಕರ್ನಾಟಕ ಗಮಕ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಶಂಕರನಾರಾಯಣ ಭಟ್ ತೆಕ್ಕೇಕರೆ ಅವರು ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ.ಅವರನ್ನು ಶಾಲು ಹೊದೆಸಿ ಅಭಿನಂದಿಸಿದರು. ಬ್ಲೋಕ್ ಪಂಚಾಯಿತಿ ಸದಸ್ಯ ಮಹೇಶ್ ವಳಕ್ಕುಂಜ, ಗ್ರಾಮಪಂಚಾಯಿತಿ ಸದಸ್ಯರಾದ ಶ್ಯಾಮಪ್ರಸಾದ ಸರಳಿ, ಹರೀಶ ಮಜಿರ್ಪಳ್ಳಕಟ್ಟೆ ಜೊತೆಗಿದ್ದರು.

0 Comments