ಕುಂಬಳೆ: ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸರ್ವಿಸ್ ರಸ್ತೆಯಲ್ಲಿ ವಾಹನ ಅಪಘಾತಗಳುಂಟಾಗಿದ್ದು ಪಿಕ್ ಅಪ್ ಹಾಗೂ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಒರ್ವ ಚಿಕಿತ್ಸೆಯ ನಡುವೆ ಮೃತಪಟ್ಟಿದ್ದು , ಇನ್ನೊರ್ವನಿಗೆ ಗಂಭೀರವಾಗಿ ಗಾಯಗಳಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮೂಲದ ನಿರಂಜನ್ (23) ಮೃತಪಟ್ಟವರೆಂದು ತಿಳಿದು ಬಂದಿದೆ. ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಐದು ಬೈಕ್‌ಗಳಲ್ಲಿ ಮಂಗಳೂರಿನಿಂದ ಕಾಸರಗೋಡಿನ ಕಡೆಗೆ ವಿಹಾರಕ್ಕೆ ತೆರಳುತ್ತಿದ್ದ ಗುಂಪಿನಲ್ಲಿದ್ದ ಇಬ್ಬರು ಅಪಘಾತಕ್ಕೀಡಾಗಿದ್ದಾರೆ. ಗಾಯಾಳುಗಳಿಬ್ಬರನ್ನೂ ಮೊದಲಿಗೆ ಬಂದ್ಯೋಡಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಗಂಭೀರ ಗಾಯಗಳಾಗಿರುವ ಕಾರಣ ಮಂಗಳೂರಿಗೆ ಕರೆದೊಯ್ಯುವಂತೆ ಸೂಚಿಸಲಾಗಿತ್ತು. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

0 Comments