ಕಾಸರಗೋಡು : ಅಮೈ ಶ್ರೀ ಕೃಷ್ಣ ಭಜನಾ ಮಂದಿರದ 25ನೇ ವರ್ಷದ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು, ಸಮಿತಿ ಅಧ್ಯಕ್ಷ ಕೆ ಸದಾಶಿವ ಮಲ್ಯರವರು ಉದ್ಘಾಟನೆಯನ್ನು ನೆರವೇರಿಸಿದರು. ಸಭೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಅಮೈ, ಕೋಶಾಧಿಕಾರಿ ವೇಣುಗೋಪಾಲ್, ವೈದಿಕ ಸಮಿತಿಯ ಅಧ್ಯಕ್ಷ ಡಾ| ಕೆ.ಎನ್. ವೆಂಕಟರಮಣ ಹೊಳ್ಳ, ಭಜನಾ ಮಂದಿರದ ಗೌರವಾಧ್ಯಕ್ಷ ಗಂಗಾಧರ ಅಮೈ ಮತ್ತಿತರರು ಸಭೆಯಲ್ಲಿ ಭಾಗಿಯಾದರು. ಏಪ್ರಿಲ್ 23, 24, 25ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ, ಕಾರ್ಯಕ್ರಮಗಳೊಂದಿಗೆ ರಜತ ಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು, ಪ್ರಧಾನ ಸಲಹೆಗಾರ ದೇವದಾಸ್ ನುಳ್ಳಿಪಾಡಿ ಸ್ವಾಗತಿಸಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ರಾಜೇಶ್ ಅಮೈ ವಂದಿಸಿದರು.

0 Comments