Ticker

6/recent/ticker-posts

Ad Code

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಬಸ್ ; ತಪ್ಪಿದ ದುರಂತ

 

ಶಿವಮೊಗ್ಗ : ಖಾಸಗಿ ಬಸ್ಸೊಂದರ ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಘಟನೆ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೇರೂರ್‌ನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದಾಗ ಹಠಾತ್ತನೆ ಚಕ್ರ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತೋಟಕ್ಕೆ ನುಗ್ಗಿ, ಅಲ್ಲಿನ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಒಂದು ವೇಳೆ ತೆಂಗಿನ ಮರಕ್ಕೆ ಡಿಕ್ಕಿ ಹೊಡೆಯದೇ ಇದ್ದಲ್ಲಿ ಬಸ್ ಪಲ್ಟಿಯಾಗಿ ಪ್ರಯಾಣಿಕರ ಪ್ರಾಣಹಾನಿಯಾಗುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Post a Comment

0 Comments