Ticker

6/recent/ticker-posts

Ad Code

ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ.ಗ್ರಾ.ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

 

ಅಡ್ಯನಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್  ವಿಟ್ಲ, ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಎ ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಡ್ಯನಡ್ಕ, ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಅಡ್ಯನಡ್ಕ, ಗುರೂಜಿ ಯುವಕ ಸಂಘ ಅಡ್ಯನಡ್ಕ, ದಿವ್ಯಶಕ್ತಿ ಯುವಕ ಮಂಡಲ ಮತ್ತು ಯುವತಿ ಮಂಡಲ ಕುದ್ದುಪದವು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ ಉದ್ಘಾಟಿಸಿದರು. ಪುಷ್ಪಾಕರ ರೈ ಅಧ್ಯಕ್ಷತೆವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಮುಖ್ಯ ಅತಿಥಿಯಾಗಿದ್ದು, ಯೋಜನೆಯಲ್ಲಿ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಕೇಪು ಪಂಚಾಯತ್ ಅಧ್ಯಕ್ಷರು ಶುಭ ಹಾರೈಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ದೀಪ ಸ್ವಾಗತಿಸಿ, ಸೇವಾ ಪ್ರತಿನಿಧಿ ಗಾಯತ್ರಿ ಎಸ್ ವಂದಿಸಿದರು. ಬಿಂದು ನಿರೂಪಿಸಿದರು.

Post a Comment

0 Comments