ಕಾಸರಗೋಡು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಸಹಕಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಎನ್.ಚನಿಯಪ್ಪ ನಾಯ್ಕ ಅವರಿಗೆ ಸಾರ್ವಜನಿಕ ಅಭಿನಂದನೆ ಕಾರ್ಯಕ್ರಮ ಫೆ.14ರಂದು ಬೆಳಗ್ಗೆ 10ರಿಂದ ಕಾಸರಗೋಡು ಹೊಸ ಬಸ್ ನಿಲ್ದಾಣ ಬಳಿಯ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ ಕಾರ್ಯಕ್ರಮ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕ್ಕುನ್ನು ಚನಿಯಪ್ಪ ನಾಯ್ಕರನ್ನು ಅಭಿನಂದಿಸುವರು. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡುವರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಆಕಾಡೆಮಿ ಕಾಸರಗೋಡು ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಸಮಿತಿ ಕಾಸರಗೋಡು ಅಧ್ಯಕ್ಷ, ವಕೀಲ ಮುರಳೀಧರ ಬಳ್ಳಕ್ಕುರಾಯ, ಕೇರಳ ಪ್ರಾಂತ್ಯ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ., ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್.ನಾಸಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಗಮಕ ಕಲಾ ಪರಿಷತ್ತು ಕಾಸರಗೋಡು ಅಧ್ಯಕ್ಷರು ತೆಕ್ಕೇಕೆರೆ ಶಂಕರನಾರಾಯಣ ಭಟ್ ಅತಿಥಿಗಳಾಗಿ ಭಾಗವಹಿಸುವರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯಕಟ್ಟೆ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ ತೆಕ್ಕೇಮೂಲೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕೆ.ಎಸ್., ಪತ್ರಕರ್ತ ವಿ.ಜಿ. ಕಾಸರಗೋಡು ಉಪಸ್ಥಿತರಿರುವರು.
ಪುಸ್ತಕ ಕೊಡುಗೆ :
ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಅಶೋಕ್ ಚಂದರಗಿ ಬೆಳಗಾವಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಭಗತ್ ರಾಜ್ ನಿಜಾಮಕರಿ ರಾಯಚೂರು, ಕಜಾಪ ಓಮಾನ್ ಘಟಕದ ಅಧ್ಯಕ್ಷ ಶಿವಾನಂದ ಕೋಟ್ಯಾನ್ ಕಟಪಾಡಿ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ವಿತರಿಸಲು ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

0 Comments